ಶ್ರಾವಣ ಸೋಮವಾರ

ಶ್ರಾವಣ ಸೋಮವಾರ


ಈ ಮಾಸದ ಪ್ರತಿ ಸೋಮವಾರವು ಶ್ರಾವಣ ಸೋಮವಾರವೆಂದೇ ಪ್ರಸಿದ್ಧಿ. ಶ್ರಾವಣ ಸೋಮವಾರ ವ್ರತದ ಹಿಂದೆಯೂ ಅನೇಕ ಪುರಾಣ ಕಥೆಗಳಿವೆ. ಅಂದು ಎಲ್ಲ ಶಿವ ದೇವಾಲಯಗಳಲ್ಲಿ ಹಾಲಿನ ಅಭಿಷೇಕ ಮತ್ತು ಬಿಲ್ವಾರ್ಚನೆಗೆ ಆದ್ಯತೆ ನೀಡಲಾಗುತ್ತದೆ. ಶ್ರಾವಣ ಸೋಮವಾರದ ವ್ರತವನ್ನು ಮಾಡುವವರು, ಆ ದಿನ ಶಿವನ ಪೂಜೆ, ಧ್ಯಾನಗಳನ್ನು ಮಾಡುತ್ತಾ ಸೂರ್ಯಾಸ್ತದವರೆಗೆ ಉಪವಾಸವನ್ನು ಆಚರಿಸುತ್ತಾರೆ.  

ಶ್ರಾವಣದಲ್ಲಿ ಶಿವನನ್ನೇ ಆರಾಧಿಸುವುದೇಕೆ?

ಪುರಾಣ ಕಾಲದಲ್ಲಿ ಸಮುದ್ರ ಮಂಥನವಾದ ಸಂದರ್ಭದಲ್ಲಿ ಅಮೃತಕ್ಕಾಗಿ ದೇವತೆಗಳು ಮತ್ತು ದಾನವರು ಕಾದಾಡುತ್ತಿದ್ದರು. ಆಗ 14 ಬೇರೆ ಬೇರೆ ರತ್ನಗಳು ಮೇಲೆದ್ದು ಬರುತ್ತವೆ. ಹದಿಮೂರು ರತ್ನಗಳನ್ನು ದೇವತೆಗಳು ದಾನವರು ಹಂಚಿಕೊಳ್ಳುತ್ತಾರೆ, ಉಳಿದ ಒಂದು ರತ್ನವೇ ಹಾಲಾಹಲ. 

ಇಡೀ ಪೃಥ್ವಿಯನ್ನೇ ನಾಶಮಾಡುವ ಶಕ್ತಿಯಿರುವ ಹಾಲಾಹಲವನ್ನು ಶಿವ ಕುಡಿಯುತ್ತಾನೆ, ಪಾರ್ವತಿ ಗಂಟಲನ್ನು ಒತ್ತಿ ಹಿಡಿದ ಕಾರಣ ಹಾಲಾಹಲವು ಗಂಟಲಲ್ಲೇ ಉಳಿದುಕೊಳ್ಳುತ್ತದೆ. ಶಿವನ ಗಂಟಲು ನೀಲಿ ಬಣ್ಣಕ್ಕೆ ತಿರುಗುತ್ತದೆ. ಹಾಗಾಗಿ ಶಿವನಿಗೆ ನೀಲಕಂಠನೆಂಬ ಹೆಸರು ಬರುತ್ತದೆ. ಜಗತ್ತಿನ ಉಳಿವಿಗಾಗಿ ಶಿವ ಹಾಲಾಹಲವನ್ನು ಕುಡಿದದ್ದು ಶ್ರಾವಣ ಮಾಸದಲ್ಲಿ ಆದ ಕಾರಣ ಈ ಮಾಸದಲ್ಲಿ ಶಿವನನ್ನು ಆರಾಧಿಸುವುದು ಪುಣ್ಯಮಯವಾದದ್ದು.

ಹರ ಹರ ಮಹಾದೇವ 🔱

ಶ್ರೀ ಚಂದ್ರಮೌಳೀಶ್ವರ ಹಾಗೂ ಜಗದ್ಗುರುಗಳ ಸೇವೆಯಲ್ಲಿ

Facebook collection


 🙏

Comments

Popular posts from this blog

ವೀರಶೈವ ಪಂಚ ಪೀಠಗಳು

ಶ್ರೀ ಮ.ನಿ.ಪ್ರ ವಿರೂಪಾಕ್ಷ ಮಹಾಸ್ವಾಮಿಗಳು,ಶ್ರೀ ಗುರು ಮೂಕಪ್ಪ ಶಿವಯೋಗಿಗಳ ಮಠ, ಜಂಗಮ ಕ್ಷೇತ್ರ, ತಿಪ್ಪಾಯಿಕೊಪ್ಪ ಕಿರು ಪರಿಚಯ

Sri Jagadguru 1008 Ujjaini Shrigalu @ Abbe tumkur fair - veerashaiva