ವೈಮಾನಿಕ ದುರಂತದಲ್ಲಿ ಅಂತ್ಯ ಕಂಡ ರಾಜಕಾರಣಿಗಳು
-ಅಜಿತ್ ಪವಾರ್ -ವಿಜಯ್ ರೂಪಾನಿ 2025: ಅಹಮದಾಬಾದ್ನಿಂದ ಟೇಕ್ ಆಫ್ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿತ್ತು. ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 241 ಜನರು ಸಾವನ್ನಪ್ಪಿದ್ದರು. ಲಂಡನ್ನ ಗ್ಯಾಟ್ವಿಕ್ಗೆ ಪ್ರಯಾಣಿಸುತ್ತಿದ್ದ ಬೋಯಿಂಗ್ 787-8 ಡ್ರೀಮ್ಲೈನರ್ ವೈದ್ಯಕೀಯ ಕಾಲೇಜು ಹಾಸ್ಟೆಲ್ ಮೇಲೆ ಬಿದ್ದು ಭಾರೀ ದುರಂತ ಸಂಭವಿಸಿತ್ತು. 68 ವರ್ಷದ ವಿಜಯ್ ರೂಪಾನಿ ಬಿಜೆಪಿ ನಾಯಕರಾಗಿದ್ದರು. 2016 ರಿಂದ 2021 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. -ಸಂಜಯ್ ಗಾಂಧಿ (1980):ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುತ್ರ ಹಾಗೂ ಉತ್ತರಾಧಿಕಾರಿ ಎಂದೇ ಪರಿಗಣಿಸಲಾಗಿದ್ದ ಸಂಜಯ್ ಗಾಂಧಿ ಸಂಜಯ್ ಗಾಂಧಿ ಜೂನ್ 23, 1980 ರಂದು ದೆಹಲಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದರು. 33 ವರ್ಷದ ಅವರು ಎರಡು ಆಸನಗಳ ವಿಮಾನದಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ದುರಂತ ಸಂಭವಿಸಿತ್ತು. ಸಫ್ದರ್ಜಂಗ್ ವಿಮಾನ ನಿಲ್ದಾಣದಲ್ಲಿ ಪರೀಕ್ಷಾ ಹಾರಾಟದ ಸಮಯದಲ್ಲಿ ವಿಮಾನ ಅಪಘಾತಕ್ಕೀಡಾಗಿತ್ತು. -ಮಾಧವರಾವ್ ಸಿಂಧಿಯಾ (2001): ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ತಂದೆ ಮಾಧವರಾವ್ ಸಿಂಧಿಯಾ ಅವರು ಸಹ ವಿಮಾನ ದುರಂತದಲ್ಲಿ ಮೃತಪಟ್ಟಿದ್ದರು. ಗ್ವಾಲಿಯರ್ ರಾಜಮನೆತನದ ಸದಸ್ಯರೂ ಆಗಿದ್ದರು. ಸೆಪ್ಟೆಂಬರ್ 30,...