Smt Jayanti
Great loss to the Indian film industry. The versatile actress Smt Jayanthi is no more. ಅಭಿನಯ ಶಾರದೆ, ಹಿರಿಯ ನಟಿ ಜಯಂತಿರವರು ವಿಧಿವಶರಾಗಿರುವ ವಿಷಯ ತಿಳಿದು ಬಹಳ ಬೇಸರವಾಯಿತು. ಕನ್ನಡ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ, ಅವರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕನ್ನಡ ಚಿತ್ರರಂಗದ ಹಿರಿಯ ನಟಿ, 'ಅಭಿನಯ ಶಾರದೆ' ಎಂದೇ ಜನಪ್ರಿಯರಾಗಿದ್ದ ನಟಿ ಜಯಂತಿ ಅವರು ಇಹಲೋಕ ತ್ಯಜಿಸಿದ್ದಾರೆ ಎಂಬ ಸುದ್ದಿ ಕೇಳಿ ದುಃಖವಾಯಿತು. ಜಯಂತಿ ಅವರು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ, ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕಲಾರಂಗಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ, ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.